Breaking:

ಮಳೆ ಹವಾಂತರದಿಂದ ಕಂಗೆಟ್ಟ ಜನರಿಗೆ ಮತ್ತೊಂದು ಶಾಕ್; ಲಾ ಲಿನಾ ಮಾರುತ, ಹವಮಾನ ಇಲಾಖೆಯಿಂದ ಎಚ್ಚರಿಕೆ

ಭಾರೀ ಮಳೆಗೆ ಕರಾವಳಿ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ಈ ಮಧ್ಯೆ ಆಘಾತಕಾರಿ ಸುದ್ದಿಯೊಂದು ಬಹಿರಂಗವಾಗಿದೆ.

ಈ ಬಾರಿ ಅಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಲಾ ಲಿನಾ ಮಾರುತ ರೂಪುಗೊಳ್ಳಲಿದೆ. ಇದು ಭಾರಿ ಮಳೆಯನ್ನೇ ತರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಗಸ್ಟ್ ಮೊದಲ ವಾರಾಂತ್ಯಕ್ಕೆ ಮಳೆ ಕಡಿಮೆಯಾಗಲಿದೆ. ಆದರೆ ಆಗಸ್ಟ್ ಅಂತ್ಯ ಹಾಗೂ ಸೆಪ್ಟೆಂಬರ್ ನಲ್ಲಿ ಲಾ ನಿನಾ ಮಾರುತ ರೂಪುಗೊಂಡು ಅವಾಂತರ ಸೃಷ್ಟಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಲಾ ನಿನಾ ಮಾರುತದಿಂದ ಒಂದೇ ಭಾರಿ ಭಾರಿ ಮಳೆ ಸುರಿಯುವ ಕಾರಣ ಹಲವು ಅವಘಡ ಸಂಭವಿಸುವ ಸಾಧ್ಯತೆ ಇದೆ. ಪ್ರಮುಖವಾಗಿ ಬೆಟ್ಟದ ತಪ್ಪಲಿನ ಪ್ರದೇಶ, ನದಿ ಪಾತ್ರದ ಪ್ರದೇಶಗಳಲ್ಲಿ ಅಪಾಯ ಹೆಚ್ಚು. ಅಪಾಯಾಕಾರಿ ಬೆಟ್ಟ, ಪರ್ವತಗಳು ಕುಸಿಯುವ ಭೀತಿ ಹೆಚ್ಚಾಗಿದೆ. ಇನ್ನು ನದಿಗಳು ಉಕ್ಕಿ ಹರಿಯಲಿದೆ. ಈ ವೇಳೆ ಭೂಕುಸಿತದ ಅಪಾಯಗಳು ಕೂಡ ದಟ್ಟವಾಗಿದೆ.

ಮಧ್ಯ ಹಾಗೂ ಪಾರ್ವ ಸಮಭಾಜಕ ಪೆಸಿಫಿಕ್‌ನಲ್ಲಿ ಸಮುದ್ರದ ತಂಪಾದ ವಾತಾವರಣದಿಂದ ರೂಪುಗೊಳ್ಳುವ ಲಾ ನಿನಾ ಮಾರುತ ಭಾರತದಲ್ಲಿ ಹೆಚ್ಚಿನ ಮಳೆ ಸುರಿಸಲಿದೆ. ಇದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ ಈ ಬಾರಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Share this article

ಟಾಪ್ ನ್ಯೂಸ್