Breaking:

ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಿದ ಗುಂಪು: ಮುಂದೇನಾಯ್ತು?

ಇಬ್ಬರು ಮಹಿಳೆಯರು ತಮ್ಮ ಪ್ರದೇಶದಲ್ಲಿ ರಸ್ತೆ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಟ್ರಕ್‌ನಿಂದ ಮಣ್ಣು ಸುರಿದು ಅವರನ್ನು ಜೀವಂತವಾಗಿ ಭಾಗಶಃ ಸಮಾಧಿ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ಈ ಆಘಾತಕಾರಿ ಘಟನೆಯ ವಿಡಿಯೋ ವೈರಲ್ ಆಗಿದೆ. ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೋರೋಟ್ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾಗ ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಎಂಬ ಮಹಿಳೆಯರನ್ನು ಮಣ್ಣಿನಲ್ಲಿ  ಕುತ್ತಿಗೆಯವರೆಗೂ ಹೂತು ಹಾಕಲಾಗಿದೆ.

ಘಟನೆಯ ಬಳಿಕ ಕೆಲ  ಸ್ಥಳೀಯರು ಅವರನ್ನು ರಕ್ಷಿಸಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಆರೋಪಿಗಳ ವಿರುದ್ಧ ಕೇಸ್ ಕೂಡ ದಾಖಲಾಗಿದೆ.

 

Share this article

ಟಾಪ್ ನ್ಯೂಸ್