Breaking:

ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಗೋಡೆ ಕುಸಿತ: 9 ಮಕ್ಕಳು ದುರ್ಮರಣ

ದೇವಸ್ಥಾನದಲ್ಲಿ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.

ಶಾಹಪುರದ ಹರ್ದೌಲ್ ಬಾಬಾ ದೇವಸ್ಥಾನದಲ್ಲಿ  ಧಾರ್ಮಿಕ ಸಮಾರಂಭದ ವೇಳೆ ಈ ದಾರುಣ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ಸ್ಥಳೀಯರ ನೆರವಿನೊಂದಿಗೆ ಪೊಲೀಸರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಮೃತ ಮಕ್ಕಳು 10ರಿಂದ 15 ವರ್ಷದವರಾಗಿದ್ದಾರೆ. ವಿಶೇಷ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

 

 

Share this article

ಟಾಪ್ ನ್ಯೂಸ್