ಪ್ರವಾದಿ ಮಹಮ್ಮದ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ವಿರುದ್ಧ ಬಾಗಲಕೋಟೆಯಲ್ಲಿ ಮುಸ್ಲಿಂ ಸಮುದಾಯದಿಂದ ಜಿಲ್ಲಾಡಳಿತಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆ ವೇಳೆ ಸ್ವಾಮೀಜಿಯನ್ನು ಬಂಧಿಸುವಂತೆ ಒತ್ತಾಯ ಮಾಡಲಾಗಿದ್ದು, ಸ್ವಾಮೀಜಿ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಯನ್ನು ಬಂಧಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.
ಬಾಗಲಕೋಟೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಈ ಬಗ್ಗೆ ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ. ಸ್ವಾಮೀಜಿ ಆಗಸ್ಟ್ 15.ರಂದು ಮಹಾರಾಷ್ಟ್ರದ ನಾಸಿಕ ಜಿಲ್ಲೆಯ ಶಾಹ ಪಂಚಾಲೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರವಾದಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಹಾರಾಷ್ಟ್ರದಲ್ಲೂ ವ್ಯಾಪಕ ಪ್ರತಿಭಟನೆ ನಡೆದಿತ್ತು.