ತಿರುವನಂತಪುರಂ: ಮಲಯಾಳಂ ನಟ ಸಿದ್ದೀಕ್ ಅವರು 2016ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನಟಿ ಆರೋಪಿಸಿದ ಹಿನ್ನೆಲೆಯಲ್ಲಿ, ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಸಿದ್ದೀಕ್ ವಿರುದ್ಧ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಪರಾಧವು 2016ರಲ್ಲಿ ನಡೆದಿರುವ ಕಾರಣ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.