Breaking:

ಮಲಯಾಳಂ ಚಿತ್ರರಂಗದ ಹಿರಿಯ ನಟ, ಶಾಸಕ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಹೇಮಾ‌ ಸಮಿತಿ ವರದಿಯ ಬೆನ್ನಲ್ಲೇ ಕೇರಳ ಚಲನಚಿತ್ರ ರಂಗದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಇದೀಗ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುಕೇಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಈಗಾಗಲೇ ಆಗ್ರಹಿಸಿ ವಿರೋಧ ಪಕ್ಷಗಳು ವ್ಯಾಪಕ ಪ್ರತಿಭಟನೆ ನಡೆಸಿವೆ.



ಎಂಟು ವರ್ಷಗಳ ಹಿಂದೆ ಹೋಟೆಲ್‌ವೊಂದರಲ್ಲಿ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಟ ಸಿದ್ದೀಕ್ ವಿರುದ್ದ ತಿರುವನಂತಪುರದ ಮ್ಯೂಸಿಯಂ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿತ್ತು.

2009ರಲ್ಲಿ ಬಂಗಾಳ ನಟಿಗೆ ಕಿರುಕುಳ ನೀಡಿದ ಆರೋಪದಲ್ಲಿ ನಿರ್ದೇಶಕ ರಂಜಿತ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇದೀಗ ಮುಕೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್