Breaking:

ಬಸ್ ನಿಲ್ಲಿಸಿಲ್ಲ ಎಂದು ಸರಕಾರಿ ಬಸ್ ಗೆ ಕಲ್ಲು ಹೊಡೆದ ಯುವಕ

ಬೆಂಗಳೂರು; ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಯುವಕನೊಬ್ಬ ಕಲ್ಲು ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ತಿರುವಣ್ಣಮಲೈಗೆ ಬಸ್‌ ಹೋಗುತ್ತಿತ್ತು. ಟೌನ್‌ಹಾಲ್‌ ಬಳಿ ಚಲಿಸುತ್ತಿದ್ದ ಬಸ್‌ಗೆ ಯುವಕ ಕಲ್ಲೇಟು ಹೊಡೆದಿದ್ದಾನೆ.

ಸೆಟ್‌ಲೈಟ್‌ನಲ್ಲೇ ಬಸ್ ಫುಲ್ ರಶ್ ಅಗಿತ್ತು. ಹಾಗಾಗಿ ಬಸ್ ನ್ನು ನಿಲ್ಲಿಸಿರಲಿಲ್ಲ. ಬಸ್ ನಿಲ್ಲಿಸಲಿಲ್ಲ ಎಂದು ಕೋಪಗೊಂಡ ಯುವಕ ಕಲ್ಲು ಹೊಡೆದಿದ್ದಾನೆ.

ತಕ್ಷಣ ತಮಿಳುನಾಡು ಮೂಲದ ಮಹಾರಾಜ ಎಂಬ ಯುವಕನನ್ನು ಎಸ್‌ಜೆ ಪಾರ್ಕ್‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಯಾಣಿಕರ ಸಮೇತ ಬಸ್ಸನ್ನು ಎಸ್‌ಜೆ ಪಾರ್ಕ್‌ ಠಾಣೆಗೆ ತರಲಾಗಿತ್ತು.

ಘಟನೆ ಸಂಬಂಧ ಎಸ್‌ಜೆ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್