ಮಂಡ್ಯ; ಯುವಕನೋರ್ವ ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈ ಘಟನೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆಯಾದ ಹಿನ್ನಲೆಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಈ ನೀರಿನಲ್ಲಿ ಅಪರಿಚಿತ ಯುವಕ ಕೊಚ್ಚಿ ಹೋಗಿದ್ದಾನೆ. ನದಿಯಲ್ಲಿ ಸ್ನಾನ ಮಾಡುವ ವೇಳೆ ಈ ಅವಘಡ ನಡೆದಿದೆ ಎನ್ನಲಾಗಿದೆ.
ಈ ದೃಶ್ಯ ಕಂಡ ಸ್ಥಳೀಯರು ಯುವಕನನ್ನು ರಕ್ಷಿಸಲು ಸಾಧ್ಯವಾಗದೆ ದೃಶ್ಯವನ್ನು ವಿಡಿಯೋ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದೀಗ ವಿಡಿಯೋ ವೈರಲ್ ಆಗಿದ್ದು, ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.