Breaking:

ಮಂಗಳೂರು: ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ(27) ಮೃತ ದುರ್ದೈವಿ. ಗಣೇಶ ಅವರು ಪಣಂಬೂರಿಗೆ ಕೆಲಸಕ್ಕೆ ಹೋಗುವಾಗ ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಗೆ ವಾಹನವೊಂದು ಢಿಕ್ಕಿ ಹೊಡೆದಿದೆ.

ಗಂಭೀರವಾಗಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this article

ಟಾಪ್ ನ್ಯೂಸ್