ಮಂಗಳೂರು ಬಂದರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಶುಕ್ರವಾರ ಶಾಲೆಗೆ ಹೋಗಿದ್ದ ಶಾಹಿದಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.