ಮಂಗಳೂರು; ರಿಕ್ಷಾ ಚಲಾಯಿಸುತ್ತಿದ್ದಾಗ ಚಾಲಕ ಹೃದಯಾಘಾತದಿಂದ ರಸ್ತೆಗೆ ಬಿದ್ದಿದ್ದು, ಚಾಲಕ ಮೃತಪಟ್ಟು ಮಹಿಳೆಯೋರ್ವರು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಮೃತಪಟ್ಟ ರಿಕ್ಷಾ ಚಾಲಕ.
ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆ ಬಿದ್ದಿದ್ದಾರೆ.
ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಅದೃಷ್ಟವಶಾತ್ ಅಲ್ಲೇ ಇದ್ದ ಆಟೋ ಪಾರ್ಕಿನಲ್ಲಿ ನಿಂತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಪ್ರಯಾಣಿಕ ಮಹಿಳೆಯರಲ್ಲಿ ಓರ್ವರು ಅನಾರೋಗ್ಯದಿಂದ ಬಳಲುತ್ತಿದ್ದು ಅಪಘಾತದಿಂದ ಪಾರಾಗಿದ್ದಾರೆ.