ಹಾಸನ; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ.
ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿತವಾಗಿದೆ.
ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.