ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಗುರುಪುರ ಕಲ್ಲಕಲೆಂಬಿ ಎಂಬಲ್ಲಿ ಘಟನೆ ನಡೆದಿದೆ.
ಆಶ್ಮಿ ಶೆಟ್ಟಿ (19)ಮೃತ ವಿದ್ಯಾರ್ಥಿನಿ.
ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ಕಲಿಯುತ್ತಿದ್ದ ಆಶ್ಮಿ ಶೆಟ್ಟಿ, ದನಗಳನ್ನು ಮೇಯಿಸಿಲು ಗದ್ದೆಗೆ ತೆರಳಿದ್ದಳು. ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಗಂಭೀರ ಗಾಯಗೊಂಡಿದ್ದ ಆಶ್ಮಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಆಶ್ಮಿ ಜತೆ ಬಂದಿದ್ದ ಎರಡು ನಾಯಿಗಳು ಕೂಡ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿವೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಕಿಡಿಕಾರಿದ್ದಾರೆ.
ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.