Breaking:

ಮಂಗಳೂರು; ಕಾಲೇಜು ವಿದ್ಯಾರ್ಥಿಗಳ ನಡುವೆ ಹೊಡೆದಾಟ

ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.

ಮಂಗಳೂರು ಅಲೋಶಿಯಸ್ ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟದ ವಿಡಿಯೋ ವೈರಲ್ ಆಗಿದೆ.

ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share this article

ಟಾಪ್ ನ್ಯೂಸ್