ಮಂಗಳೂರು: ಫುಟ್ಬಾಲ್ ಆಟದ ವೇಳೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದು, ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ.
ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ.
ಹಲ್ಲೆ ಮಾಡಿದ ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿತ ವಿದ್ಯಾರ್ಥಿಗಳು ಮಂಗಳೂರು ಮಹಾಕಾಳಿ ಪಡ್ಪು ಬಳಿ ಮನಬಂದಂತೆ ಥಳಿಸಿ, ಸಿಗರೇಟ್‌ನಿಂದ ಸುಟ್ಟು ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಅರೆಬೆತ್ತಲು ಗೊಳಿಸಿ ಬಸ್ಕಿ ಹೊಡೆಸಿ ಕ್ಷಮೆ ಕೇಳುವಂತೆ ಥಳಿಸಿದ್ದಾರೆ. ಈ ಕುರಿತ ವಿಡಿಯೊ ವೈರಲ್ ಆಗಿದೆ.