ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಮುತ್ತಿಗೆಗೆ ಯತ್ನಿಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.