ಮಂಗಳೂರು: ದೇಶದ ಎಲ್ಲೆಡೆ ಭಾರೀ ಸುದ್ದಿಯಾಗಿದ್ದ 2012ರ ಜು. 28ರಂದು ನಡೆದಿದ್ದ ಮಂಗಳೂರಿನ ಹೋಂಸ್ಟೇ ದಾಳಿ ಪ್ರಕರಣ ಎಲ್ಲಾ ಆರೋಪಿಗಳು ಖುಲಾಸೆಗೊಳಿಸಿ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪುನೀಡಿದೆ.
ನ್ಯಾಯಾಧೀಶ ಕಾಂತರಾಜು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದು, ಓರ್ವ ಪತ್ರಕರ್ತ ನವೀನ್ ಸೂರಿಂಜೆ ಮೇಲಿದ್ದ ಪ್ರಕರಣ ನ್ಯಾಯಾಲಯ ಕೈಬಿಟ್ಟಿತ್ತು.
ಇಂದು ಉಳಿದ 40 ಆರೋಪಿಗಳನ್ನು ದೋಷ ಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.
ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿದ್ದರು.