Breaking:

ಮಂಗಳೂರು ಜೈಲಿನ ಮೇಲೆ 150ಕ್ಕೂ ಅಧಿಕ ಪೊಲೀಸರು ದಾಳಿ

ಮಂಗಳೂರು: ಬೆಳ್ಳಂ ಬೆಳಗ್ಗೆ ಮಂಗಳೂರು ಪೊಲೀಸರು  ಜೈಲಿನ ಮೇಲೆ ದಾಳಿ ಮಾಡಿದ್ದು, ಈ ವೇಳೆ ಗಾಂಜಾ, ಡ್ರಗ್ಸ್ , ಮೊಬೈಲ್​ ಫೋನ್​ಗಳು, ಡಿವೈಸ್​ಗಳು ಪತ್ತೆಯಾಗಿವೆ.

ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್​ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದಾರೆ‌.

ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಆದೇಶ ಹೊರಡಿಸಿದ್ದಾರೆ.

Share this article

ಟಾಪ್ ನ್ಯೂಸ್