Breaking:

ಮಂಗಳೂರು; ನವಜಾತ ಶಿಶುವಿಗೆ ಅನ್ಯಾಯ; ಕುಟುಂಬದ ಆರೋಪ, ಡಿಸಿಗೆ ದೂರು

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಅನ್ಯಾಯವಾಗಿದೆ ಎಂದು ಮಗುವಿನ ಪೋಷಕರು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಪಾಣೆಮಂಗಳೂರಿನ ನಿವಾಸಿ ಹಾಗೂ ಸಂತ್ರಸ್ತೆ ಭವ್ಯ ಎಂಬವರು ತಮಗೆ ಅನ್ಯಾಯ ಆಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಇದಲ್ಲದೆ ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸೂಕ್ತ ತನಿಖೆಗೆ ಆಗ್ರಹಿಸಲಾಗಿದೆ.

ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಭವ್ಯ ಅವರು ತಮ್ಮ ಎರಡನೆ ಹೆರಿಗೆಗಾಗಿ ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಆ. 17ರಂದು ತೆರಳಿದ್ದರು. ಈ ಸಂದರ್ಭ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯರು ಇಲ್ಲದ ಕಾರಣ ಅವರನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಆ.18ರ ಬೆಳಗ್ಗೆ 2 ಗಂಟೆಯ ವೇಳೆಗೆ ದಾಖಲಿಸಲಾಗಿತ್ತು. ಬೆಳಗ್ಗೆ 9.50ರ ಸುಮಾರಿಗೆ ಭವ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ವೇಳೆ ಆಸ್ಪತ್ರೆಯ ವೈದ್ಯರು ಮಗು ನಾರ್ಮಲ್ ಆಗಿದೆ ಎಂದು ತಿಳಿಸಿದ್ದರು. ಮಗುವಿಗೆ ಉಸಿರಾಟದ ತೊಂದರೆ ಇರುವುದಾಗಿ ಹೇಳಿ ಮಗುವನ್ನು ಎನ್‌ಐಸಿಯುಗೆ ದಾಖಲಿಸಲಾಗಿತ್ತು. ಆ ಬಳಿಕ ಮಂಗಳವಾರ ಸಂಜೆ ಬಂದು ಮಗುವಿಗೆ ಒಂದು ಕಣ್ಣಿನ ಸಮಸ್ಯೆ ಇದೆ ಎಂದು ಹೇಳಿದ್ದಾರೆ. ಇದರಿಂದ ಆಘಾತವಾಗಿದೆ ಮತ್ತು ಮಗುವಿಗೆ ಅನ್ಯಾಯವಾಗಿದೆ ಎಂದು ದೂರು ನೀಡಲಾಗಿದೆ.

Share this article

ಟಾಪ್ ನ್ಯೂಸ್