Breaking:

ಮಂಗಳೂರಿನಲ್ಲಿ ಕಳ್ಳರ ಹಾವಳಿ; ಎರಡು ಕಡೆ ಕಳ್ಳತನಕ್ಕೆ ಯತ್ನ

ಮಂಗಳೂರು: ಪದವಿನಂಗಡಿ ಬಳಿ ಎರಡು ಕಡೆ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಪದವಿನಂಗಡಿ ಸಮೀಪದ ಮಹಾತ್ಮನಗರ ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ.

ರಾತ್ರಿ 1.45ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ. ತಕ್ಷಣ ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಕಾವೂರು ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಲ್ಲದೆ ತಡರಾತ್ರಿ ನಾಲ್ವರ ತಂಡ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿದ್ದು, ಈ ವೇಳೆ ಪಕ್ಕದ ಮನೆಯವರು ಎಚ್ಚರಗೊಂಡಿದ್ದು ಕಳ್ಳರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

 

Share this article

ಟಾಪ್ ನ್ಯೂಸ್