Breaking:

ಮಂಗಳೂರು: ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.

ಮೂಡುಪೆರಾರ ಕಾಯರಾಣೆ ನಿವಾಸಿ ಪ್ರದೀಪ್ ಪೂಜಾರಿ(31)ಮೃತ ದುರ್ದೈವಿ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ತಾಯಿ,ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Share this article

ಟಾಪ್ ನ್ಯೂಸ್