ಟಾರ್ಗೆಟ್ ಗ್ರೂಪಿನ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ಕಲ್ಲಾಪು ಬಳಿ ಭಾನುವಾರ ರಾತ್ರಿ ನಡೆದಿದೆ.
ತನ್ನ ತಾಯಿಯೊಂದಿಗೆ ಕಲ್ಲಾಪು ರೆಸ್ಟೋರೆಂಟ್ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದಿದ್ದ ಐದಾರು ಮಂದಿ ಇದ್ದ ತಂಡ ಹತ್ಯೆಗೈದು ಪರಾರಿಯಾಗಿದೆ.
ದರೋಡೆ ಕೇಸಿನಲ್ಲಿ ಜೈಲು ಪಾಲಾಗಿದ್ದ ಸಮೀರ್ ಎರಡು ದಿನಗಳ ಹಿಂದಷ್ಟೇ ಜಾಮೀನಿನ ಮೂಲಕ ಹೊರಬಂದಿದ್ದ ಎಂದು ತಿಳಿದು ಬಂದಿದೆ.