Breaking:

ಮಂಗಳೂರು: ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ; ಇಬ್ಬರ ಬಂಧನ

ಮಂಗಳೂರು: ವಿದೇಶದಲ್ಲಿರುವ ಸೈಬರ್‌ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ನಗರ ಸೆನ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಏರ್‌ಟೆಲ್‌ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್‌ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ.ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಬೆಳ್ತಂಗಡಿಯ ಶಮದ್‌ ಮಹಮ್ಮದ್‌ ಸಮರ್‌ (26) ಮತ್ತು ಮಹಮ್ಮದ್‌ ಅಜೀಂ(19) ಬಂಧಿತರು. ಶಮದ್‌ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್‌ ಅಜೀಂ ಕೂಡ ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ ಎಂದು ವರದಿಯಾಗಿದೆ.

ಇವರು ಬೆಳ್ತಂಗಡಿಯ ಮುಸ್ತಾಫ‌ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ ಸ್ವಲ್ಪ ಹಣ ನೀಡಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು ಎನ್ನುವುದು ತನಿಖೆಯ ವೇಳೆ ಕಂಡು ಬಂದಿದೆ.

ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400ರಿಂದ 500 ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್‌ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ‌ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

.

Share this article

ಟಾಪ್ ನ್ಯೂಸ್