ಮಣಿಪಾಲ; ಕಾರಿನ ಗ್ಲಾಸ್ ಹಾಕಿ ಕಾರಿನಲ್ಲಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ.
ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು.
ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.