ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ್ದು, ಯಶವಂತ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ.
ಬಹಳ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.