ಬೆಂಗಳೂರಿನಲ್ಲಿ ಮಾಂಸಕ್ಕೆ ಸಂಬಂಧಿಸಿ ವಿವಾದ ಸೃಷ್ಟಿಸಿದ್ದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದ ಪೊಲೀಸ್ ಅಧಿಕಾರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಧಮ್ಕಿ ಹಾಕಿದ್ದು, ಇದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಪುನೀತ್ ಕೆರೆಹಳ್ಳಿಗೆ ಲಾಕಪ್ ನಲ್ಲಿ ಬಟ್ಟೆ ಬಿಚ್ಚಿ ಕೂರಿಸುವ ಮೂಲಕ ಅವರನ್ನು ಅಪಮಾನಿಸಿದ್ದಾರೆಂದು ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿ ACP ಚಂದನ್ ಅವರಿಗೆ ಠಾಣೆಗೆ ಬರ್ತಿನಿ ನೀವು ಇರಬೇಕು ಎಂದು ಧಮ್ಕಿ ಹಾಕಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಜೈಪುರದಿಂದ ರೈಲೊಂದರಲ್ಲಿ ಬಂದಿದ್ದ ಬಾಕ್ಸ್ ಗಳಲ್ಲಿ ನಾಯಿ ಮಾಂಸ ತುಂಬಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಅಂಡ್ ಗ್ಯಾಂಗ್ ಗಲಾಟೆ ಮಾಡಿದ್ದರು. ನಂತರ ಪೊಲೀಸರ ಕರ್ತವ್ಯದ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ದೊಡ್ಡ ಗಲಾಟೆ ಮಾಡುವುದಕ್ಕೆ ಮುಂದಾದಾಗ ಆತನನ್ನು ಅರೆಸ್ಟ್ ಮಾಡಿ ಬಂಧಿಸಿದ್ದರು. ನಂತರ ಆತನನ್ನು ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ.