ಮೈಸೂರಿನ ಹೂಟಗಳ್ಳಿಯಲ್ಲಿ ಕಾಲೇಜು ಹಾಸ್ಟೆಲ್ನಲ್ಲಿ ಅನಾರೋಗ್ಯದಿಂದ ವಿದ್ಯಾರ್ಥಿನಿ ಮೃತಪಟ್ಟಿರುವ ಪ್ರಕರಣ ಇದೀಗ ವಿಭಿನ್ನ ತಿರುವು ಪಡೆದುಕೊಂಡಿದೆ. ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣವೆಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದ ಜಯಪ್ರಾರ್ಥನಾ (17) ಮೃತ ವಿದ್ಯಾರ್ಥಿನಿ.
ಜಯಪ್ರಾರ್ಥನಾ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತಿದ್ದರು. ಊಟದ ಬಳಿಕ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಿಚಾರ ತಿಳಿದು ಖಾಸಗಿ ಆಸ್ಪತ್ರೆಯಲ್ಲಿ ಆಡಳಿತ ಮಂಡಳಿ ಚಿಕಿತ್ಸೆ ಕೊಡಿಸಿತ್ತು. ಆದರೆ ಅನಾರೋಗ್ಯದ ವಿಚಾರವನ್ನು ಪೋಷಕರ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ್ದಾರೆ. ಸೋಮವಾರ ಬೆಳಗ್ಗೆ ಜಯಪ್ರಾರ್ಥನಾಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿತ್ತು. ಆ ಸಮಯದಲ್ಲಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾರೆ. ಆದರೆ ಪೋಷಕರು ಆಸ್ಪತ್ರೆಗೆ ಬರುವ ಮುನ್ನವೇ ಜಯಪ್ರಾರ್ಥನಾ ಮೃತಪಟ್ಟಿದ್ದಾಳೆ.
ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯ ಕಾರಣ ಎಂದು ಪೋಷಕರ ಆರೋಪ ಮಾಡಿದ್ದಾರೆ. ಈ ಬಗ್ಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.