ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರ ಕೂಡಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಮಂಡಕಳ್ಳಿ ಗ್ರಾಮದ ಮೋನಿಕಾ(20)
ಮೈಸೂರಿನ ಜ್ಯೋತಿನಗರದ ಮನು(22) ಆತ್ಮಹತ್ಯೆ ಮಾಡಿಕೊಂಡವರು.
ಸಂಬಂಧಿಗಳಾದ್ದ ಇವರಿಬ್ಬರೂ ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರು ಇಬ್ಬರಿಗೂ ಮದುವೆ ಮಾಡಲು ತೀರ್ಮಾನಿಸಿದ್ದರು. ಆದರೆ ಇತ್ತೀಚೆಗೆ ಇವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾಗಿ ಗಲಾಟೆ ನಡೆದಿದೆ. ಇದರಿಂದ ಮೋನಿಕಾ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಿಯತಮೆ ಆತ್ಮಹತ್ಯೆ ವಿಷಯ ತಿಳಿದ ಮನು ಸ್ಥಳಕ್ಕೆ ಧಾವಿಸಿ ಮೋನಿಕಾಳನ್ನು ಆಸ್ಪತ್ರೆಗೆ ಕರೆ ತಂದಿದ್ದಾನೆ. ಬಳಿಕ ತನ್ನ ಮನೆಗೆ ಹೋಗಿ ಆತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ