ಬೆಂಗಳೂರು: ‘ನಮ್ಮ ಮೆಟ್ರೋ’ ಟ್ರ್ಯಾಕ್ಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜೆ 5.45ರ ಸುಮಾರಿಗೆ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ.
ಈ ಕುರಿತು ನಮ್ಮ ಮೆಟ್ರೋ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 5.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಘಟನೆಯಿಂದ ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ಮಾಹಿತಿ ನೀಡಿದೆ.