Breaking:

ಉದ್ಯೋಗ ಸುದ್ದಿ: ನಮ್ಮ ಮೆಟ್ರೋದಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ.

5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ ಮ್ಯಾನೇಜರ್ (ಸಿಗ್ನಲಿಂಗ್) ಹುದ್ದೆಗಳಿಗ ನೇಮಕಾತಿ ನಡೆಯಲಿದೆ. ಗರಿಷ್ಠ ವಯೋಮತಿ ಕಾಂಟ್ರಾಕ್ಟ್ ಹುದ್ದೆಗೆ 58 ವರ್ಷ ಹಾಗೂ ಡೆಪ್ಯೂಟೇಶನ್‌ಗೆ 55 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ತಿಂಗಳ ವೇತನ ಸಿಗಲಿದೆ. ಇನ್ನು ಅರ್ಹತೆ ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಷನ್, ಮೆಕಾನಿಕಲ್, ಸಿವಿಲ್ ಎಂಜಿನೀಯರಿಂಗ್ ಪದವಿ, ಕಂಪ್ಯೂಟರ್ ಸೈನ್ಸ್, ಟೆಲಿಕಮ್ಯೂನಿಕೇಶನ್ ಪದವಿಯಲ್ಲಿ ಯಾವುದಾದರು ಪದವಿ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳು ಆರಂಭಿಕ ಮೂರು ವರ್ಷ ಕಾಂಟ್ರಾಕ್ಟ್‌ನಲ್ಲಿ ಕೆಲಸ ಮಾಡುತ್ತಾರೆ. ಬಳಿಕ ಅವರ ಪರ್ಫಾಮೆನ್ಸ್ ಆಧಾರದಲ್ಲಿ ಮುಂದಿನ ನಿರ್ಧಾರವನ್ನು ನಮ್ಮ ಮೆಟ್ರೋ ಸಂಸ್ಥೆ ತೆಗೆದುಕೊಳ್ಳಲಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದವರ ಆಪ್ಲಿಕೇಶನ್ ಹಾಗೂ ದಾಖಲೆ ಪರೀಶಿಲಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್ ಮಾಡಿದವರನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ.

ನಮ್ಮ ಮೆಟ್ರೋ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅಸಕ್ತರು ಹಾಗೂ ಅರ್ಹರು ಸೆಪ್ಟೆಂಬರ್ 25ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು.

Share this article

ಟಾಪ್ ನ್ಯೂಸ್