ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ನಿನ್ನೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ಯುವಕನ ಆತ್ಮಹತ್ಯೆಗೆ ಕಾರಣ ಬಯಲಾಗಿದೆ.
35ರ ಹರೆಯದ ನವೀನ್ ಕುಮಾರ್ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವೀನ್ ಕುಮಾರ್ ಬೆಂಗಳೂರಿನಲ್ಲಿ ಹಾರ್ಡ್ ವೇರ್ ಬ್ಯುಸಿನೆಸ್ ಮಾಡಿಕೊಂಡಿದ್ದರು. ಬ್ಯುಸಿನೆಸ್ ನಲ್ಲಿ ನಷ್ಟವಾದ ಹಿನ್ನೆಲೆ, ಸಾಲ ತೀರಿಸಲು ಸಾಧ್ಯವಾಗಿಲ್ಲ. ಸಾಲ ಕೊಟ್ಟವರು ದಿನಾ ವಾಪಾಸ್ಸು ಕೇಳುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.