Breaking:

ಮೈಸೂರಿನ ವಿಜಯಶಂಕರ್ ಸೇರಿ 6 ಮಂದಿಯನ್ನು ನೂತನ ರಾಜ್ಯಪಾಲರಾಗಿ ನೇಮಿಸಿದ ರಾಷ್ಟ್ರಪತಿ: ರಾಜ್ಯಪಾಲ ಹುದ್ದೆಗೇರಿದ ವಿಜಯಶಂಕರ್ ಹಿನ್ನೆಲೆ ಏನು?

ರಾಷ್ಟ್ರಪತಿ ದ್ರೌಪದಿ ಮುರ್ಮು 6 ಮಂದಿ ನೂತ‌ನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.

6 ಮಂದಿ ನೂತನ ರಾಜ್ಯಪಾಲರಲ್ಲಿ ಕರ್ನಾಟಕದ ಮಾಜಿ ಸಂಸದ, ಮಾಜಿ ಸಚಿವ, ಸಿ.ಎಚ್‌.ವಿಜಯ್‌ ಶಂಕರ್ ಅವರನ್ನು ಮೇಘಾಲಯಕ್ಕೆ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ

ತೆಲಂಗಾಣ ಹಾಗೂ ಜಾರ್ಖಂಡ್‌ನ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ, ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್‌ಗೆ ನೇಮಿಸಲಾಗಿದೆ. ರಾಮನ್ ಡೇಕಾ ಅವರನ್ನು ಛತ್ತೀಸ್‌ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ, ಓಂ ಪ್ರಕಾಶ್ ಮಾಥುರ್‌ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ ನೇಮಿಸಲಾಗಿದೆ.

ಅಸ್ಸಾಂನಹಾಲಿ ರಾಜ್ಯಪಾಲರಾದ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರಾಗಿ, ಜೊತೆಗೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.

ಅಸ್ಸಾಂಗೆ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ನೇಮಿಸಿದ್ದು, ಇವರಿಗೆ ಮಣಿಪುರದ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಕೆ.ಕೈಲಾಸನಾಥನ್ ಅವರನ್ನು ಪುದುಚೇರಿಯ ಉಪರಾಜ್ಯಪಾಲರಾಗಿನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದೆ.

ಯಾರು ಈ  ಸಿ.ಎಚ್. ವಿಜಯ್‌ ಶಂಕರ್?

ರಾಣೇಬೆನ್ನೂರು ಮೂಲದವರಾದ ವಿಜಯ್‌ಶಂಕರ್‌ ಅವರು 1994ರಿಂದ 98ರವರೆಗೆ ಮೊದಲ ಬಾರಿಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2010ರಿಂದ 16ರವರೆಗೆ ವಿಧಾನ ಪರಿಷತ್ ಶಾಸಕರಾಗಿದ್ದರು ಇವರು 2010ರಲ್ಲಿ ಕರ್ನಾಟಕದ ಕ್ಯಾಬಿನೆಟ್ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

Share this article

ಟಾಪ್ ನ್ಯೂಸ್