-ನಿಝಾಮುದ್ದೀನ್ ಶರೀಫ್ ಮೃತ
ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಚಿತ್ತಾಪುರ ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ನಡೆದಿದೆ.
ಪಟ್ಟಣದ ನಾಸರಜಂಗ್ ಬಡಾವಣೆಯ ನಿಝಾಮುದ್ದಿನ್ ಶರೀಫ್ (22) ಕೊಲೆಯಾದ ಯುವಕ.
ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದ. ಜು. 25ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೋದವನು ರಾತ್ರಿ 9 ಗಂಟೆಯಾದರೂ ಮರಳಿ ಬಾರದಿದ್ದಾಗ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದರೆ ರಾತ್ರಿ 11 ಗಂಟೆಗೆ ಕೆಸಿಎಲ್ ಕಂಪನಿ ಬಳಿಯ ಕಾಲೊನಿಯೊಂದರ ಪಕ್ಕದಲ್ಲಿ ಶರೀಫ್ ಮೃತದೇಹ ಪತ್ತೆಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ನಿಝಾಮುದ್ದೀನ್ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.