ಖಾಸಗಿ ಶಾಲೆಯೊಂದರ ತರಗತಿಯಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.
ನೋಯ್ಡಾದ ಶಾಲೆಯೊಂದರ ವಿಡಿಯೋ ಇದು ಎಂದು ಹೇಳಲಾಗುತ್ತದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ವಿಡಿಯೋದಲ್ಲಿ ಶಾಲಾ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರತಿಯ ಕೊನೆಯ ಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡುತ್ತಿದ್ದರು, ಅವರ ಪಕ್ಕದಲ್ಲೇ ಇತರ ಮಕ್ಕಳು ಕೂಡ ಕಿಸ್ಸಿಂಗ್ ರೊಮ್ಯಾನ್ಸ್ ನಲ್ಲಿ ತೊಡಗಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ವ್ಯಾಪಕ ಆಗ್ರಹ ಕೇಳಿ ಬಂದಿದೆ.