ಒಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ.
ಹೈಮಾ ಪ್ರದೇಶದಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು ಎಂದು ಗುರುತಿಸಲಾಗಿದೆ
ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.