ಮಂಗಳೂರು; ಖ್ಯಾತ ತುಳು ರಂಗಭೂಮಿ ಕಲಾವಿದ, ಒರಿಯರ್ದೊರಿ ಅಸಲ್ ತುಳು ಸಿನಿಮಾದ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಅವರು ಇಂದು ನಿಧನರಾಗಿದ್ದಾರೆ.
ಅಂಬ್ಲಮೊಗರುವಿನ ಮನೆಯಲ್ಲಿ ಅಸ್ವಸ್ಥರಾಗಿದ್ದ ಅಶೋಕ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟಿದ್ದಾರೆ.
ವೃತ್ತಿಪರ ಕಲಾವಿದರಾದ ಅಶೋಕ್ ಅವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ನಾಟಕ ತಂಡದಲ್ಲಿ ಕಲಾ ಸೇವೆ ಸಲ್ಲಿಸಿದ್ದರು.
ಇವರ ಅಗಲಿಕೆಗೆ ತುಳು ಸಿನಿಮಾರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.