ಪ್ರಾಂಶುಪಾಲರು ಬೈದರೆಂದು ಮನನೊಂದು ವಿದ್ಯಾರ್ಥಿನಿಯೊಬ್ಬಳು ಶಾಲಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವಿಫಲ ಪ್ರಯತ್ನ ಮಾಡಿದ್ದಾಳೆ.
ಈ ಘಟನೆ ಬೆಂಗಳೂರಿ ಬಾಪೂಜಿನಗರದ A1 ಫಹಾದ್ ಶಾಲೆಯಲ್ಲಿ ನಡೆದಿದೆ.
ಕಟ್ಟಡದಿಂದ ಜಿಗಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದೆ. ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.