ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಬಳಿ ನಡೆದಿದೆ.
ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು.
ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.