Breaking:

ಕನ್ನಡಿಗರಿಗೆ ಖಾಸಗಿ ಉದ್ಯೋಗಗಳಲ್ಲಿ ಮೀಸಲಾತಿ ಮಸೂದೆಗೆ ತಡೆ

ಬೆಂಗಳೂರು: ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ಕರ್ನಾಟಕ ಸರ್ಕಾರ ತಾತ್ಕಾಲಿಕವಾಗಿ ತಡೆಹಿಡಿದಿದೆ.

ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ರಾಜ್ಯ ಸಚಿವಾಲಯ ತಿಳಿಸಿದೆ.

 

Share this article

ಟಾಪ್ ನ್ಯೂಸ್