ಪುತ್ತೂರು: ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ.
ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು. ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದಾಗ ಕುರುಂಜ ಮಣ್ಣಾಪು ಬಳಿ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ.
ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ ಮೇಲೆ ಕಾಡು ಹಂದಿ ದಾಳಿ ನಡೆಸಿ ಗಾಯಗೊಳಿಸಿದೆ. ಘಟನೆಯಲ್ಲಿ ಗಾಯಗೊಂಡ ಧನುಷ್ ಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.