ಪುತ್ತೂರು; ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಬಂದ ಪರಿಚಯಸ್ಥ ವಿದ್ಯಾರ್ಥಿ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಇದನ್ನು ನಿರಾಕರಿಸಿದಾಗ ಬಾಲಕಿಗೆ ಆತನ ಕೈಯ್ಯಲ್ಲಿದ್ದ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.