ಪುತ್ತೂರು: ಲಾರಿಯ ಟಯರ್ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ರಾತ್ರಿ ನಡೆದಿದೆ.
ಗಂಭೀರ ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ.
ಲಾರಿಯ ಟಯರ್ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಪಂಚರ್ ತೆಗಿಸಿ ರಶೀದ್ ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್ ಸಹಿತ ರಶೀದ್ ಎಸೆಯಲ್ಪಟ್ಟಿದ್ದಾರೆ.
ಈ ವೇಳೆ ತೀವ್ರ ಗಾಯಗೊಂಡ ರಶೀದ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.