ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ್ಲೂರಿನಲ್ಲಿ ನಡೆದಿದೆ.
ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.