ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಂಡು ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸಂಪ್ಯ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಪಂಚೋಡಿ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ರಾಜೇಶ್ ಪಂಚೋಡಿ, ಪ್ರವೀಶ್ ನಾಯರ್, ರಾಕೇಶ್ ಪಂಚೋಡಿ, ಜಯರಾಜ್, ಪ್ರಜ್ವಲ್ ಮಡ್ಯಳಮಜಲು, ಸಂಜನ್ ರೈ ಹೊಡೆದಾಡಿಕೊಂಡಿದ್ದಾರೆ.
ಈ ಪೈಕಿ ರಾಕೇಶ್ ಪಂಚೋಡಿ ಎಂಬಾತ ತಲ್ವಾರ್ ಹಿಡಿದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ.
ಸಂಪ್ಯ ಠಾಣೆ ಎಸ್‌ಐ ಜಂಬೂರಾಜ್ ಬಿ.ಮಹಾಜನ್ ನೇತೃತ್ವದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ಸಂಪ್ಯ ಠಾಣೆಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.