ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದೆ.
ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.
ಈ ವೇಳೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬೆಳಾಲು ಮತ್ತಿತರರು ಉಪಸ್ಥಿತರಿದ್ದರು.