ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಕೇರಳದ ವಯನಾಡು ಭೂಕುಸಿತದ ದುರಂತ ಪ್ರದೇಶಕ್ಕೆ ಭೇಟಿ ಕೊಟ್ಟಿದ್ದಾರೆ.
ಇಂದು ಬೆಳಗ್ಗೆ 9.30ಕ್ಕೆ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಗಾಂಧಿ ಮತ್ತು ವಾದ್ರಾ ನಂತರ ರಸ್ತೆ ಮೂಲಕ ವಯನಾಡಿಗೆ ತೆರಳಿದ್ದಾರೆ.
ಈ ಕುರಿತು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ದುರಂತ ಸಂಭವಿಸಿದ ವಯನಾಡಿನ ಮೇಪ್ಪಾಡಿಗೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತಲುಪಿದ್ದು, ಅಲ್ಲಿ ಸಂತ್ರಸ್ತರನ್ನು ಭೇಟಿಯಾಗಿದ್ದಾರೆ ಎಂದು ಬರೆದುಕೊಂಡಿದೆ.
ಜುಲೈ 30 ರಂದು ಮುಂಡಕ್ಕೈ, ಚೂರಲ್ ಮಲ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 276ಕ್ಕೆ ತಲುಪಿದೆ.
ಈ ವೇಳೆ ಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಆಲಪ್ಪುಝ ಸಂಸದ ಕೆಸಿ ವೇಣುಗೋಪಾಲ್ ರಾಹುಲ್ ಮತ್ತು ಪ್ರಿಯಾಂಕ ಗಾಂಧಿಗೆ ಸಾಥ್ ನೀಡಿದ್ದಾರೆ.