Breaking:

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಹುಲ್ ಗಾಂಧಿಯ ಕಡೆಗಣನೆ?

ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಸಮಾರಂಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು  ಐದನೇ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಇದಕ್ಕೆ ಒಲಂಪಿಕ್ಸ್ ಆಟಗಾರರಿಗೆ ಸ್ಥಾನ ನೀಡಲು ಈ ರೀತಿ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇದರಿಂದಾಗಿ ಕೆಲವು ಕೇಂದ್ರ ಸಚಿವರನ್ನು ಹಿಂದಿನ ಸಾಲಿನಲ್ಲಿ ಕೂರಿಸಲಾಗಿದೆ ಎಂದು ಹೇಳಿದೆ.

ರಾಹುಲ್ ಗಾಂಧಿ ಅವರು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರ್ರಿ ಪಕ್ಕದಲ್ಲಿ ಕುಳಿತಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಿಗೆ ಕ್ಯಾಬಿನೆಟ್ ಸಚಿವ ಸ್ಥಾನಮಾನವಿದೆ. ಆದರೆ ಸರಕಾರ ಇದನ್ನು ಉಲ್ಲಂಘನೆ ಮಾಡಿದೆ ಎಂದು ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಶಿಷ್ಟಾಚಾರದ ಪ್ರಕಾರ ಉಭಯ ಸದನಗಳ ವಿಪಕ್ಷ ನಾಯಕನಿಗೆ ಮೊದಲ ಸಾಲಿನಲ್ಲಿ ಜಾಗಕೊಡಬೇಕಾಗುತ್ತದೆ. ಆದರೆ ಐದನೇ ಸಾಲಿನಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಸನ ನೀಡಲಾಗಿದೆ. ಇದು ಕೇವಲ ರಾಹುಲ್ ಗಾಂಧಿಗೆ ಅಥವಾ ವಿರೋಧ ಪಕ್ಷದ ನಾಯಕನಿಗೆ ಮಾಡಿದ ಅವಮಾನವಲ್ಲ ಬದಲಾಗಿ ಭಾರತದ ಜನತೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಹೇಳಿದೆ.

Share this article

ಟಾಪ್ ನ್ಯೂಸ್