ನೀಟ್ ಪರೀಕ್ಷೆ ರದ್ದು ಹಾಗೂ ಕೇಂದ್ರ ಸರ್ಕಾರದ ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ವಿಧಾನಸಭೆ ಅದನ್ನು ಅಂಗೀಕರಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜುಲೈ 22ರಂದು ನಡೆದ ನಡೆದ ಸಂಪುಟ ಸಭೆಯಲ್ಲಿ ನೀಟ್ ಪರೀಕ್ಷೆ ಮತ್ತು ಕೇಂದ್ರ ಸರ್ಕಾರ ಒಂದು ದೇಶ, ಒಂದು ಚುನಾವಣೆ ವಿರೋಧಿಸಲು ನಿರ್ಧರಿಸಲಾಗಿತ್ತು.
ಈ ಕುರಿತು ನಿರ್ಣಯ ಮಂಡಿಸಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಕೇಂದ್ರ ಸರ್ಕಾರದ ‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆ ಮತ್ತು ಜನಸಂಖ್ಯೆ ಆಧಾರದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಮರು ವಿಂಗಡನೆ ಪ್ರಕ್ರಿಯೆಯನ್ನೂ ವಿರೋಧಿಸಿ ರಾಜ್ಯ ಸರ್ಕಾರ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದು ಇದನ್ನು ಅಂಗೀಕರಿಸಲಾಗಿದೆ ಎಂದು ಹೇಳಿದ್ದಾರೆ.