ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯ ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ್ ಗ್ರಾಮದಲ್ಲಿ ನಡೆದಿದೆ.
ಸಚಿನ್ ದಳವಾಯಿ(22), ಪ್ರಿಯಾ ಮಡಿವಾಳರ(19) ಮೃತ ಪ್ರೇಮಿಗಳಾಗಿದ್ದು, ಮಹಾಲಿಂಗಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇವರಿಬ್ಬರ ಜಾತಿ ಬೇರೆಯಾಗಿದ್ದರಿಂದ ಹುಡುಗನ ಮನೆಯವರು ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಮನನೊಂದ ಜೋಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದೆ.