70 ವರ್ಷದ ವೃದ್ಧನೋರ್ವ ತನ್ನ ಪತ್ನಿಯ ಸಾವಿನ ಬಳಿಕ 25 ವರ್ಷದ ಯುವತಿಯೊಂದಿಗೆ ಮರುಮದುವೆ ಮಾಡಿಕೊಂಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಬೈದಾ ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಸಲೀಮುಲ್ಲಾ ನೂರಾನಿ(70) ಎಂಬವರು ಹಮ್ಜಾಪುರದ ಇಸ್ಲಾಂನಗರ ನಿವಾಸಿ ರೇಷ್ಮಾ ಪರ್ವೀನ್(25)ಅವರನ್ನು ಮದುವೆಯಾಗಿದ್ದಾರೆ.
ವೃದ್ಧ ನೂರಾನಿ ರೈತನಾಗಿದ್ದು, ಅವರ ಹೆಂಡತಿ ನಾಲ್ಕು ವರ್ಷಗಳ ಹಿಂದೆ ಸಾವನ್ನಪ್ಪಿದ್ದರು. ನೂರಾನಿ ಅವರು ತನ್ನ ಮಕ್ಕಳಿಗೆ ಮದುವೆ ಮಾಡಿದ ನಂತರ ತಾನು ಒಂಟಿ ಜೀವನ ನಡೆಸುತ್ತಿದ್ದೇನೆ. ನನಗೆ ಆಸರೆಯಾಗಲು ಯಾರೂ ಇರಲಿಲ್ಲ ಎಂದು ಸ್ಥಳೀಯರೆದುರು ಬೇಸರ ವ್ಯಕ್ತಪಡಿಸಿದ್ದರು. ಈ ವೇಳೆ ಸ್ಥಳೀಯರು ರೇಷ್ಮಾ ಪರ್ವೀನ್ ರನ್ನು ವಿವಾಹ ಮಾಡಿಕೊಳ್ಳುವ ಪ್ರಸ್ತಾಪ ಮುಂದಿಟ್ಟರು. ಅದಕ್ಕೊಪ್ಪಿದ ನೂರಾನಿ ಅವರು ಯುವತಿಯನ್ನು ವಿವಾಹವಾಗಿದ್ದಾರೆ.
ದಂಪತಿಗಳು ಸ್ವ ಇಚ್ಚೆಯಿಂದಲೇ ವಿವಾಹವಾಗಿದ್ದಾರೆ ಎನ್ನಲಾಗಿದೆ. ಇಬ್ಬರ ಒಮ್ಮತದ ವಿವಾಹದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.